ಬೆಂಗಳೂರು, ಮಾ.15-ನಗರದಲ್ಲಿ ಗೂಂಡಾಗಳು, ರೌಡಿಗಳು ಹೆಡೆ ಬಿಚ್ಚುತ್ತಿದ್ದಾರೆ. ಇವರನ್ನು ಹೆಡೆಮುರಿ ಕಟ್ಟಿ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಪೆÇಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪೆÇಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿರುವ ಸಂಬಂಧ ಅಧಿಕಾರಿಗಳ ವಿರುದ್ಧ ಗರಂ ಆದ ಅವರು, ಚುನಾವಣಾ ಸಮಯದಲ್ಲಿ ಈ ರೀತಿಯಾದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಗೂಂಡಾಗಳು, ಸರಗಳ್ಳರನ್ನು ಮೊದಲು ಮಟ್ಟ ಹಾಕಿ. ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಎಂದು ಹೇಳಿದ್ದಾರೆ.
ಗೂಂಡಾಗಳ ಚಟುವಟಿಕೆಗಳು ಹೆಚ್ಚುತ್ತಿರುವುದರಿಂದ ನಮಗೆ ತೊಂದರೆಯಾಗುತ್ತದೆ. ಇಂತಹ ಚಟುವಟಿಕೆಗಳನ್ನು ನಿರ್ದಾಕ್ಷಿಣ್ಯವಾಗಿ ನಿಯಂತ್ರಿಸಬೇಕು ಎಂದು ಅವರು ಹೇಳಿದ್ದಾರೆ.
ನಗರದಲ್ಲಿ ಗಸ್ತು ಹೆಚ್ಚಿಸಿ, ಪೊಲೀಸರು ತೀವ್ರ ನಿಗಾ ವಹಿಸಿ ಕಟ್ಟೆಚ್ಚರದಿಂದ ಕರ್ತವ್ಯ ನಿರ್ವಹಿಸಿ, ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಎಂದು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಐಪಿಎಸ್ ಅಸೋಸಿಯೇಷನ್ ಅಧ್ಯಕ್ಷ ಆರ್.ಪಿ.ಶರ್ಮಾ ಬರೆದಿರುವ ಪತ್ರದ ಬಗ್ಗೆಯೂ ಚರ್ಚೆ ನಡೆದಿದೆ.