ಆದಿಚುಂಚನಗಿರಿ, ಫೆ.20-ಕರ್ನಾಟಕದಲ್ಲಿರುವ ಮಠಗಳು ಧರ್ಮಕ್ಷೇತ್ರದ ಜತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪರಿಮಿತ ಕೊಡುಗೆಯನ್ನು ನೀಡುತ್ತಿವೆ ಎಂದು ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಆದಿಚುಂಚನಗಿರಿ ಪೀಠಾಧ್ಯಕ್ಷರಾ ದಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆರನೇ ವರ್ಷದ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಮತ್ತು ವಿಜ್ಞಾತಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಹಳಷ್ಟು ಮಠಗಳಿವೆ ಅವೆಲ್ಲವೂಧಾರ್ಮಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಿವೆ. ಆದರೆ ರಾಜ್ಯದಲ್ಲಿರುವ ಮಠಗಳು ಧಾರ್ಮಿಕ ಕ್ಷೇತ್ರದ ಜತೆಗೆ ಶಿಕ್ಷಣ ಕ್ಷೇತ್ರದಲ್ಲೂ ಬಹಳಷ್ಟು ಕೊಡುಗೆ ನೀಡುತ್ತಿರುವುದು ಪ್ರಶಂಸನೀಯ ಎಂದರು.
ವಿಶೇಷವಾಗಿ ಶ್ರೀ ಆದಿಚುಂಚನಗಿರಿ ಮಠದಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬಹು ದೊಡ್ಡ ಜವಾಬ್ದಾರಿಯನ್ನು ಹೊತ್ತುಜ್ಞಾನ-ವಿಜ್ಞಾನಕ್ಷೇತ್ರದಲ್ಲಿ ಶ್ರೀಮಠದ ಕೀರ್ತಿಯನ್ನು ಹೆಚ್ಚು ವಿಸ್ತರಿಸಿರುವುದು ಶ್ಲಾಘನೀಯ ಎಂದರು.
ಇಂದು ವಿಜ್ಞಾನಕ್ಷೇತ್ರದಲ್ಲಿ ನಾವು ಬಹಳಷ್ಟು ಸಾಧನೆ ಮಾಡಿದ್ದೇವೆ. ಆಧುನಿಕ ಜಗತ್ತಿನಲ್ಲಿ ಭಾರತ ಬಹುದೊಡ್ಡ ಸಾಧನೆ ಮಾಡಿದೆ. ಇಡೀ ವಿಶ್ವದಲ್ಲಿ ಅಣುಶಕ್ತಿಯಲ್ಲಿ ಭಾರತ 5ನೇ ಸ್ಥಾನದಲ್ಲಿರುವುದು ಕಡಿಮೆಯೇನಲ್ಲ ಇಷ್ಟು ಸಾಧನೆ ಮಾಡಲು ನಮ್ಮದೇಶ ವಿಜ್ಞಾನಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ಈ ನಿಟ್ಟಿನಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಹ ಸ್ತುತ್ಯಾರ್ಹವಾಗಿದೆಎಂದು ತಿಳಿಸಿದರು.
ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಶ್ರೀಮಠವು ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ನೀಡುತ್ತಿರುವ ಕೊಡುಗೆ ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ವಿಜ್ಞಾನಿ ಡಾ.ಶರತ್ ಚಂದ್ರಅವರಿಗೆ ಶ್ರೀಮಠದ ವತಿಯಿಂದಜ್ಞಾನ-ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ವಿಜ್ಞಾತಂ ಪ್ರಶಸ್ತಿಯನ್ನು ಕೊಡಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶರತ್ ಚಂದ್ರ ಅವರು ದೇಶದ ಸಾಧಕರ ಸಾಲಿನಲ್ಲಿ ತಮ್ಮನ್ನು ಗುರುತಿಸಿ ಗೌರವಿಸಿದ ಶ್ರೀಮಠಕ್ಕೆ ಧ್ಯನವಾದಗಳನ್ನು ಸಲ್ಲಿಸಿದರು. ವಿದ್ಯಾರ್ಥಿಗಳು ಕಾಲಹರಣ ಮಾಡದೇ ಶಿಕ್ಷಣ ಕಲಿಯಬೇಕು. ಆತ್ಮಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.