ನವದೆಹಲಿ: ದೇಶದಲ್ಲಿರುವ ಕಾಶ್ಮೀರಿಗಳ ಮೇಲೆ ಹಲ್ಲೆಯಾಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಗುಂಪು ಹತ್ಯೆ ಪ್ರಕರಣಗಳ ತನಿಖೆಗೆ ನೇಮಿಸಲಾಗಿದ್ದ ನೋಡಲ್ ಅಧಿಕಾರಿಗಳು ಕಾಶ್ಮೀರಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಕುರಿತಾದ ತನಿಖೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸಾಂವಿಧಾನಿಕ ಪೀಠ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ನೋಡಲ್ ಅಧಿಕಾರಿಗಳಿಗೆ ವ್ಯಾಪಕವಾದ ಪ್ರಚಾರವನ್ನು ನೀಡಬೇಕು. ಇದರಿಂದ ಹಲ್ಲೆಗೊಳಗಾದವರು ಅಧಿಕಾರಿಗಳನ್ನು ಸಂಪರ್ಕಿಸಲು ನೆರವಾಗಲು ಸಹಾಯವಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಕಾಶ್ಮೀರಿ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಬೆದರಿಕೆ, ಹಲ್ಲೆ ಹಾಗೂ ಸಾಮಾಜಿಕ ಬಹಿಷ್ಕಾರಗಳಂತಹ ಘಟನೆಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾ ನಿರ್ದೇಶಕರು ಹಾಗೂ ದೆಹಲಿ ಪೊಲೀಸ್ ಆಯುಕ್ತರಿಗೆ ಸಾಂವಿಧಾನಿಕ ಪೀಠದ ನ್ಯಾಯಮೂರ್ತಿ ಸಂಜೀವ್ ಖನ್ನ ಸೂಚಿಸಿದ್ದಾರೆ.
SC instructs Centre, 11 states to take care of Kashmiris