ಬೆಂಗಳೂರು; ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೂ ಬಗೆಹರಿಸಿಕೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್ ತಿಳಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಚುನಾವಣಾ ಮೈತ್ರಿ (ಪೂರ್ವ ಹೊಂದಾಣಿಕೆ) ಕುರಿತಂತೆ ನಡೆದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
ಸೀಟು ಹಂಚಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯವಿಲ್ಲ. ಕೊಡು-ಕೊಳ್ಳುವ ವಿಚಾರದಲ್ಲಿ ಹೆಚ್ಚುಕಡಿಮೆಯಾಗಬಹುದು. ಬಗೆಹರಿಸಲಾಗದಂತಹ ಸಮಸ್ಯೆ ಯಾವುದೂ ಇಲ್ಲ. ಸೀಟು ಹಂಚಿಕೆ ವಿಚಾರವೂ ಸಹ ಬಗೆಹರಿಯುತ್ತದೆ. ಉಭಯ ಪಕ್ಷಗಳ ನಾಯಕರು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.