ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಮುಂಜಾನೆ ನಡೆದ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ.

ಪುಲ್ವಾಮಾದ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಮೇರೆಗೆ ಭದ್ರತಾ ಪಡೆಗಳು ದಾಳಿ ನಡೆಸಿದ್ದವು. ಉಗ್ರರು ಅಡಗಿದ್ದ ಮನೆಯನ್ನು ನೆಲಸಮಗೊಳಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಪಟ್ಟಣದಾದ್ಯಂತ ಮೊಬೈಲ್​ ನೆಟ್​ವರ್ಕ್​ ಸ್ಥಗಿತಗೊಳಿಸಲಾಗಿದೆ.

ಈ ನಡುವೆ ಗಡಿ ನಿಯಂತ್ರಣ ರೇಖೆ ಬಳಿ ಪಾಕ್​ನಿಂದ ಕದನವಿರಾಮ ಉಲ್ಲಂಘನೆಯಾಗುತ್ತಿದ್ದು, ಉಗ್ರರು ಮತ್ತು ಭಾರತೀಯ ಸೇನೆ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ.

security forces killed two terrorists in pulwama

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ