ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ: 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ: ವಿ.ಕೆ ಸಿಂಗ್

ನವದೆಹಲಿ: ಬಾಲಕೋಟ್ ನಲ್ಲಿ ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ವಾಯುಸೇನೆ ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಭಾರತ ಏರ್ ಸ್ಟ್ರೈಕ್ ಉಗ್ರರ ನೆಲೆಗಳ ಮೇಲೆ ಮಾತ್ರ ನಡೆಸುವ ಉದ್ದೇಶ ಹೊಂದಿತ್ತು. ಏಕೆಂದರೆ ಜನವಸತಿ ಪ್ರದೇಶದಲ್ಲಿ ದಾಳಿ ನಡೆಸಿದರೆ ನಾಗರಿಕರು ಸಾವನ್ನಪ್ಪುವ ಕಾರಣದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದ್ದರಿಂದ ಜನವಸತಿಯಿಂದ ದೂರ ನಿರ್ಮಾಣ ಮಾಡಲಾಗಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಲಕೋಟ್ ಕಟ್ಟಡದಲ್ಲಿ ನೆಲೆಸಿದ್ದ ವ್ಯಕ್ತಿಗಳನ್ನು ಆಧಾರಿಸಿ ಅವರು ಹೇಳಿಕೆ ಕೊಟ್ಟಿದ್ದಾರೆ. ಅವರು ಅಧಿಕೃತವಾಗಿ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಲ್ಲ. ಅಷ್ಟು ಮಂದಿ ಸಾವನ್ನಪ್ಪಿರಬಹುದು ಎಂದು ಅಂದಾಜಿನಲ್ಲಿ ಹೇಳಿದ್ದಾರೆ ಅಷ್ಟೇ ಎಂದರು. ತಿಳಿಸಿದರು.

ಕಾಂಗ್ರೆಸ್ ಪಕ್ಷದ ವಕ್ತಾರರದ ದಿಗ್ವಿಜಯ್ ಸಿಂಗ್ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೇ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿದ್ದು, ನಾನು ದಿಗ್ವಿಜಯ್ ಸಿಂಗ್‍ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದರು.

IAF strike: Amit Shah’s claim that 250 terrorists were killed is an estimate, says Union minister

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ