ಬೆಂಗಳೂರು, ಮಾ.16- ಮೊಬೈಲ್ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ದರೋಡೆಕೋರರು ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಶೋಕನಗರದ ರಿಚ್ಮಂಡ್ ಟೌನ್ ನಿವಾಸಿ ಅಬ್ದುಲ್ ಭಾಷ ದರೋಡೆಗೊಳಗಾದ ವ್ಯಕ್ತಿ.
ನಿನ್ನೆ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಬಳಿ ಅಬ್ದುಲ್ ನಡೆದು ಹೋಗುತ್ತಿರುವಾಗ ಇವರ ಮೊಬೈಲ್ಗೆ ಕರೆ ಬಂದಿದೆ.
ಮೊಬೈಲ್ನಲ್ಲಿ ಮಾತನಾಡುತ್ತ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ನಲ್ಲಿ ಬಂದ ಇಬ್ಬರು ದರೋಡೆಕೋರರು ಅಬ್ದುಲ್ರ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ವಿವೇಕನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ದರೋಡೆಕೋರರಿಗಾಗಿ ಬಲೆ ಬೀಸಿದ್ದಾರೆ.