ಪ್ರಧಾನಿ ಮೋದಿ ಭಯೋತ್ಪಾದಕರಂತೆ ಕಾಣುತ್ತಾರೆ ಎಂದ ನಟಿ ವಿಜಯಶಾಂತಿ

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರಂತೆ ಕಾಣುತ್ತಾರೆ. ಜನರನ್ನು ಪ್ರೀತಿಸುವ ಬದಲು ಮೋದಿಯವರು ಜನರನ್ನು ಹೆದರಿಸುತ್ತಿದ್ದು, ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ನಟಿ, ರಾಜಕಾರಣಿ ವಿಜಯಶಂತಿ ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣದ ಶಂಶಾಬಾದ್​ನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ ವಿಜಯಶಾಂತಿ, ಪ್ರಧಾನಿ ಮೋದಿ ಆಡಳಿತದಲ್ಲಿ ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಅವರನ್ನು ನೋಡಿದರೆ ಉಗ್ರಗಾಮಿಯಂತೆ ಕಾಣಿಸುತ್ತಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್​ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಇಡೀ ದೇಶದ ಜನ ಬದುಕುವಂತಾಗಿದೆ. ಅವರು ಸರ್ವಾಧಿಕಾರಿ ಧೋರಣೆಯ ಆಡಳಿತದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡವುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಹಿಡಿದು ಜಿಎಸ್​ಟಿ ಮತ್ತು ಪುಲ್ವಾಮಾ ದಾಳಿವರೆಗೆ ಮೋದಿ ಎಲ್ಲರನ್ನೂ ಹೆದರಿಸುತ್ತಿದ್ದಾರೆ. ಪ್ರತಿಯೊಂದು ವಿಷಯದಲ್ಲೂ ಅವರು ಇದೇ ಧೋರಣೆ ಅನುಸರಿಸುತ್ತಿದ್ದಾರೆ. ಮೋದಿ ಈ ಮೂಲಕ ಭಯೋತ್ಪಾದಕನಂತೆ ತೋರುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ವಿಜಯ್ ಶಾಂತಿ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ವಿಜಯಶಾಂತಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

PM Modi looks like a terrorist, says Congress leader Vijaya Shanti

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ