ನವದೆಹಲಿ: ಚುನಾವಣೆಯಲ್ಲಿ ಅರ್ಧದಷ್ಟು ಮತ ಯಂತ್ರಗಳನ್ನು ವಿವಿಪ್ಯಾಟ್ನೊಂದಿಗೆ ಕ್ರಾಸ್ ಚೆಕ್ ಮಾಡಿ, ಆನಂತರ ಫಲಿತಾಂಶ ಘೋಷಣೆ ಮಾಡಬೇಕೆಂದು ಪ್ರತಿಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದು, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣಾ ಆಯೋಗಕ್ಕೆ ನೋಟೀಸ್ ನೀಡಿದೆ.
ಮತಯಂತ್ರಗಳ ಕುರಿತಾಗಿ 21 ವಿಪಕ್ಷಗಳು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸಿಜೆಐ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ. ವಿಪಕ್ಷಗಳ ಆರೋಪ ಸಂಬಂಧ ಚುನಾವಣಾ ಆಯೋಗದ ಹಿರಿಯ ಅಧಿಕಾರಿ ಉತ್ತರಿಸಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ಪೀಠ ಹೇಳಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 25ಕ್ಕೆ ಮುಂದೂಡಿದೆ.
Supreme Court issues notice to Election Commission