ಮೈಸೂರು, ಮಾ.15-ಮೈಸೂರು ವಿಶ್ವವಿದ್ಯಾನಿಲಯದ 99ನೇ ವಾರ್ಷಿಕ ಘಟಿಕೋತ್ಸವವು ಇದೇ 17 ರಂದು ಏರ್ಪಡಿಸಲಾಗಿದೆ ಎಂದು ಕುಲಪತಿ ಪೆÇ್ರ.ಜಿ.ಹೇಮಂತಕುಮಾರ್ ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ಮೈಸೂರು ವಿವಿಯ ಕ್ರಾರ್ಫರ್ಡ್ ಭವನದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಘಟಿಕೋತ್ಸವದಲ್ಲಿ ಮಾತಾ ಅಮೃತಾನಂದಮಯಿ ಮಠ ಮತ್ತು ಅಮೃತ ವಿಶ್ವವಿದ್ಯಾ ಪೀಠಂನ ಅಧ್ಯಕ್ಷರಾದ ಅಮೃತಾನಂದಮಯಿದೇವಿ, ಶ್ರೀ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಯವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಡಾ.ಅನಿಲ್ ಡಿ. ಸಹಪ್ರಬುಧ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಚಿವ ಜಿ.ಟಿ.ದೇವೇಗೌಡರು ಸಮಾರಂಭದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಪೂರ್ವಯೋಜಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಭಾಯಿವಾಲಾ ಅವರು ಈ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 28,163 ವಿದ್ಯಾರ್ಥಿಗಳಿಗೆ ಪದವಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಈ ಪೈಕಿ 18,127 ವಿದ್ಯಾರ್ಥಿನಿಯರು ಹಾಗೂ 10,036 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 384 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿಯನ್ನು ಪ್ರದಾನ ಮಾಡುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವರಾದ ಲಿಂಗರಾಜು ಗಾಂಧಿ ಹಾಗೂ ಮಹದೇವ ಇದ್ದರು.