ನವದೆಹಲಿ: ಕಾಂಗ್ರೆಸ್ ಪಕ್ಷ ಯಾವಾಗಲೂಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲ್‌ವಾದದ ಬಗ್ಗೆ ಮೃದು ಧೋರಣೆ ಹೊಂದಿತ್ತು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಬ್ಲಾಗ್ ನಲ್ಲಿ ಗುಡುಗಿರುವ ಶಾ, ದೇಶದ ಭದ್ರತೆಗೆ ಬೆದರಿಕೆ ಒಡ್ಡುವ ಭಯೋತ್ಪಾದನೆ ಪಿಡುಗುಗಳ ವಿರುದ್ಧ ಕಾಂಗ್ರೆಸ್ ಎಂದೂ ದಿಟ್ಟ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್‌ಪಕ್ಷಕ್ಕೆ ವ್ಯತಿರಿಕ್ತವಾಗಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ರಾಷ್ಟ್ರೀಯ ಏಕತೆ, ಭದ್ರತೆ ಮತ್ತು ಭಾವೈಕ್ಯದ ಹಿತಾಸಕ್ತಿಯಲ್ಲಿ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲ್‌ವಾದದ ವಿರುದ್ಧ ದೃಢವಾದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಂದಹಾರ ಹೈಜಾಕಿಂಗ್ ಕೇಸನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದಿದ್ದಾರೆ. ಜೈಶ್ ಎ ಮೊಹಮ್ಮದ್ ಸ್ಥಾಪಕ ಉಗ್ರ ಮಸೂದ್ ಅಜರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಾಕಿಸ್ಥಾನದ ಮೇಲೆ ಅಂತಾರಾಷ್ಟ್ರೀಯ ಸಮುದಾಯ ತೀವ್ರವಾದ ಒತ್ತಡ ಹೇರುತ್ತಿರುವ ನಡುವೆ ರಾಹುಲ್ ಕಂದಹಾರ್ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.
congress-was-always-soft-on-terrorism-amit-shah