ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ತನ್ನ ಮುಂದುವರೆಯುತ್ತದೆ: ಭಾರತ

ನವದೆಹಲಿ: ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರ್ಪಡೆಗೊಳಿಸಲು ಚೀನಾ ಅಡ್ಡಿ ಮುಂದುವರೆದಿರುವಂತೆಯೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ, ತಮ್ಮ ಪ್ರಯತ್ನ ಮುಂದುವರೆಯಲಿದ್ದು, ಸಂಯಮದಿಂದ ಕಾಯುತ್ತೇವೆ ಎಂದು ಹೇಳಿದೆ.

ಉಗ್ರ ಸಂಘಟನೆಗಳ ವಿರುದ್ಧ ಪಾಕಿಸ್ತಾನ ಸರ್ಕಾರ ಕೈಗೊಂಡಿರುವ ಕ್ರಮಗಳು ಕೇವಲ ಕಣ್ಣೊರೆಸುವ ತಂತ್ರ ಎಂದು ಟೀಕಿಸಿರುವ ಭಾರತ, ಪಾಕಿಸ್ತಾನ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಅಂತೆಯೇ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ತನ್ನ ಪ್ರಯತ್ನ ಮುಂದುವರೆಯಲಿದ್ದು, ಈ ಸಂಬಂಧ ಅಗತ್ಯ ರಾಜತಾಂತ್ರಿಕ ಯೋಜನೆ ರೂಪಿಸುವುದಾಗಿ ಹೇಳಿದೆ. ಅಂತೆಯೇ ಈ ಸಂಬಂಧ ಯಾವುದೇ ಆತುರದ ನಿರ್ಧಾರ ಕೈಗೊಳ್ಳದೇ ಸಂಯಮದಿಂದ ಕಾಯುತ್ತೇವೆ ಎಂದೂ ಭಾರತ ಹೇಳಿದೆ.

ಚೀನಾ ಪಾಕಿಸ್ತಾನದೊಂದಿಗೆ ಕೆಲ ವಿಚಾರಗಳ ಕುರಿತು ಸ್ಪಷ್ಟನೆ ಪಡೆಯಬೇಕು ಎಂದು ಬಯಸಿದೆ. ಬಹುಶಃ ಸ್ಪಷ್ಟನೆ ಸಿಕ್ಕ ಬಳಿಕ ಈ ಸಂಬಂಧ ಪರಿಣಾಮಕಾರಿ ನಿರ್ಧಾರ ಕೈಗೊಳ್ಳುವ ವಿಶ್ವಾಸ ತಮಗಿದೆ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.

India is “cautiously confident” that eventually Masood Azhar will get listed as a global terrorist.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ