ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಇಬ್ಬರು ಮಕ್ಕಳು

ಬೆಂಗಳೂರು,ಮಾ.16- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿಯೊಬ್ಬರು ತನ್ನಿಬ್ಬರು ವಿಕಲಚೇತನ ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟಕೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಗೋಗೂರಿನ ಪಟಾಲಮ್ಮ ದೇವಸ್ಥಾನ ಸಮೀಪದ ನಿವಾಸಿಗಳಾದ ರಾಧಮ್ಮ(50) ಮತ್ತು ಮಕ್ಕಳಾದ ಹರೀಶ್(28) , ಸಂತೋಷ್(25) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು.

ಮೂಲತಃ ತಮಿಳುನಾಡಿನ ತಳಿ ಗ್ರಾಮದ ನಿವಾಸಿಯಾದ ರಾಧಮ್ಮ ಹಲವು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದು ನೆಲೆಸಿದ್ದರು.
ಗಂಡನನ್ನು ತೊರೆದಿದ್ದ ರಾಧಮ್ಮ ತನ್ನಿಬ್ಬರು ವಿಕಲಚೇತನ ಮಕ್ಕಳೊಂದಿಗೆ ದೊಡ್ಡ ತೋಗೂರಿನ ಪಟಾಲಮ್ಮ ದೇವಸ್ಥಾನ ಸಮೀಪದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು.

ಇಬ್ಬರು ಮಕ್ಕಳು ವಿಕಲಚೇತನರಾಗಿದ್ದರಿಂದ ಮನೆಯಲ್ಲಿಯೇ ಇರುತ್ತಿದ್ದರು. ಮಕ್ಕಳ ಪಾಲನೆ ಮಾಡಿಕೊಂಡಿದ್ದ ರಾಧಮ್ಮ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ.

ರಾತ್ರಿ ಇಬ್ಬರು ಮಕ್ಕಳಿಗೂ ವಿಷ ಕೊಟ್ಟು ಸಾಯಿಸಿದ ನಂತರ ತಾಯಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಎಷ್ಟು ಹೊತ್ತಾದರೂ ರಾಧಮ್ಮ ಅವರ ಮನೆ ಬಾಗಿಲು ತೆಗೆದಿರುವುದನ್ನು ಗಮನಿಸಿದ ನೆರೆಹೊರೆಯವರು ಮನೆ ಬಳಿ ಹೋಗಿ ನೋಡಿದಾಗಲೇ ಮೂವರೂ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಎಲೆಕ್ಟ್ರಾನಿಕ್ ಸಿಟಿ ಪೆÇಲಿಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೆÇಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ