ಬಿಜೆಪಿ ತನ್ನ ಕಾರ್ಯಕರ್ತರು ಹಾಗೂ ನಾಯಕರನ್ನು ಪೊಳ್ಳು ಯೋಜನೆಗಳ ಮಾರುಕಟ್ಟೆಯನ್ನಾಗಿ ಬಳಸಿಕೊಳ್ಳುತ್ತಿದೆ: ರೇಷ್ಮಾ ಪಟೇಲ್

ಗಾಂಧಿನಗರ: ಬಿಜೆಪಿ ಪೊಳ್ಳು ಯೋಜನೆಗಳನ್ನು ಉತ್ತೇಜಿಸುವ ಮಾರ್ಕೆಟಿಂಗ್ ಕಂಪೆನಿಯಾಗಿದೆ ಎಂದು ಗುಡುಗಿರುವ ರೇಷ್ಮಾ ಪಟೇಲ್ ಬಿಜೆಪಿ ತೊರೆದಿದ್ದಾರೆ

ಗುಜರಾತ್‍ನ ರಾಜ್‍ಕೋಟ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಷ್ಮಾ ಪಟೇಲ್ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಜೀತು ವಾಘನಿ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ.

ಬಿಜೆಪಿಯು ತನ್ನ ಕಾರ್ಯಕರ್ತರು ಹಾಗೂ ನಾಯಕರನ್ನು ಪೊಳ್ಳು ಯೋಜನೆಗಳ ಮಾರುಕಟ್ಟೆಯನ್ನಾಗಿ ಬಳಸಿಕೊಳ್ಳುತ್ತಿದೆ. ಹೀಗಾಗಿ ನಾನು ಪಕ್ಷದಿಂದ ಹಿಂದೆ ಸರಿಯಲು ನಿರ್ಧರಿಸಿದೆ ಎಂದು ತಿಳಿಸಿದರು.

ಪೋರಬಂದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ನಿರ್ಧರಿಸಿದ್ದೇನೆ. ಈ ನಿಟ್ಟಿನಲ್ಲಿ ಸಿದ್ಧತೆ ಕೂಡ ನಡೆಸಿರುವೆ. ವಿರೋಧ ಪಕ್ಷಗಳು ಒಗ್ಗಟ್ಟಾಗಿ ಒಂದೇ ವೇದಿಕೆಯಲ್ಲಿ ಸೇರಬೇಕು. ನನಗೆ ಒಂದು ಅವಕಾಶ ನೀಡಬೇಕು ಎಂದು ಕೇಳಿಕೊಂಡಿರುವೆ. ಇದರಿಂದಾಗಿ ಮಹಿಳಾ ಪ್ರಾತಿನಿಧ್ಯ ಹೆಚ್ಚಾಗುತ್ತದೆ ಎಂದು ಮನವಿ ಮಾಡಿಕೊಂಡರು.

ಒಂದು ವೇಳೆ ವಿರೋಧ ಪಕ್ಷಗಳು ನನಗೆ ಅವಕಾಶ ನೀಡದಿದ್ದರೇ, ಪೋರಬಂದರು ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ರೇಷ್ಮಾ ಪಟೇಲ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ