ಮನೋಹರ್ ಪರಿಕ್ಕರ್ ವಿಧಿವಶ ಹಿನ್ನಲೆ: ಸಂಜೆ 5 ಗಂಟೆಗೆ ಅಂತ್ಯಕ್ರಿಯೆ, ಗೋವಾದಲ್ಲಿ 7 ದಿನ ಶೋಕಾಚರಣೆ

ಪಣಜಿ: ಅನಾರೋಗ್ಯದಿಂದ ನಿಧನರಾದ ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಮನೋಹರ್ ಪರಿಕ್ಕರ್ ಅವರ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.

ಪರಿಕ್ಕರ್ ಅವರ ಅಂತಿಮ ಯಾತ್ರೆ ಬೆಳಗ್ಗೆ 9:30ಕ್ಕೆ ಆರಂಭವಾಗಿದ್ದು, ಪಾರ್ಥಿವ ಶರೀರವನ್ನು ಪಂಜಿಮ್‌ನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಒಂದು ಗಂಟೆ ಕಾಲ ಇರಿಸಲಾಗಿತ್ತು. 11 ಗಂಟೆಯಿಂದ ಕಲಾ ಅಕಾಡೆಮಿಯಲ್ಲಿ ಪಾರ್ಥೀವಶಸೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಅಂತಿಮ ಮೆರವಣಿಗೆ ಮೀರಾಮಾರ್ ಬೀಚ್‌ನಲ್ಲಿ ಸಂಜೆ 4 ಗಂಟೆಗೆ ಆರಂಭವಾಗಲಿದ್ದು, ಸಂಜೆ 5ಕ್ಕೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿಗಳ ನಿಧನದ ಹಿನ್ನೆಲೆಯಲ್ಲಿ ಗೋವಾ ಸರಕಾರ ಇಂದು ಸಾರ್ವತ್ರಿಕ ರಜೆ ಘೋಷಿಸಿದ್ದು, ಏಳು ದಿನಗಳ ಶೋಕಾಚರಣೆ ನಡೆಸಲಿದೆ.

ಪರಿಕ್ಕರ್ ನಿಧನದ ಸುದ್ದಿ ಪ್ರಕಟವಾಗುತ್ತಿದ್ದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದರು.

goa cm manohar parrikar, laid-rest,in panaji

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ