ಬೇಲೂರು, ಮಾ.20- ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ತಾಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಯುವ ಅಧ್ಯಕ್ಷ ಹರೀಶ್ ಹೇಳಿದರು.
ಪಟ್ಟಣದಲ್ಲಿ ಏರ್ಪಡಿಸಿದ್ದ ತಾಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯುವಕರಿಗಾಗಿ, ಉತ್ಸಾಹಿಗಳಾಗಿ ಎಲ್ಲ ವರ್ಗದ ಜನರಿಗೆ ಹತ್ತಿರವಿರುವ ಪ್ರಜ್ವಲ್ ರೇವಣ್ಣ ಅವರನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವುದಕ್ಕೆ ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದರು.
ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಮಾತನಾಡಿ, ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಸುಮಾರು 1 ಲಕ್ಷ ಜನಸಂಖ್ಯೆ ಇದೆ.
ಅದರಲ್ಲಿ 50 ಸಾವಿರ ಮತದಾರರಿದ್ದೇವೆ. ಯುವ ಮುಖಂಡರಾಗಿರುವ ಪ್ರಜ್ವಲ್ ರೇವಣ್ಣ ಅವರು ಬೇಲೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ಅಲ್ಲದೆ, ತಾಲೂಕಿನ ಹಳೇಬೀಡು-ಮಾದಿಹಳ್ಳಿ ಹೋಬಳಿಗೆ ನೀರು ಹರಿಸುವಲ್ಲಿ ಶಾಸಕ ಲಿಂಗೇಶ್ ಅವರಿಗೆ ಸಾಥ್ ನೀಡಿ ಆ ಭಾಗಕ್ಕೆ ನೀರು ಹರಿಸುವುದಕ್ಕೆ ಸಹಕಾರ ನೀಡಿದ್ದಾರೆ ಎಂದು ವಿವರಿಸಿದರು.
ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಮುಖಂಡರಾದ ಸಿದ್ದಯ್ಯ, ದೊರೆಸ್ವಾಮಿ, ರಾಮದಾಸ್, ಪೂರ್ಣೇಶ್, ನಿಂಗರಾಜ್ ಇದ್ದರು.






