ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಮಾಡಿದೆ.
ಬಿಜೆಪಿ ಸಭೆ ಬಳಿಕ ಕೇಂದ್ರ ಸಚಿವ ಜೆಪಿ ನಡ್ಡಾ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದರೆ, ಗಾಂಧಿ ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ.
ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ಪರ್ಧಿಸುತ್ತಿದ್ದು, ಕೇಂದ್ರ ಸಚಿವ ವಿ.ಕೆ ಸಿಂಗ್ ಗಾಜಿಯಾಬಾದ್ ನಿಂದ ಕಣಕ್ಕಿಳಿಯಲಿದ್ದಾರೆ.
ಇನ್ನು ರಾಜ್ಯದ 21 ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಹಾಸನ ಲೋಕಸಭಾ ಕ್ಷೇತ್ರದಿಂದ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡ ಎ ಮಂಜುಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮತ್ತೋರ್ವ ನಾಯಕ ಉಮೇಶ್ ಜಾಧವ್ ಗೆ ಗುಲ್ಬರ್ಗಾದಿಂದ ಟಿಕೆಟ್ ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬಾಗಲಕೋಟೆ – ಪಿ.ಸಿ.ಗದ್ದಿಗೌಡರ್
ಕಲುಬುರಗಿ – ಡಾ.ಉಮೇಶ್ ಜಾಧವ್
ಬೀದರ್ – ಭಗವಾನ್ ಖೂಬಾ
ವಿಜಯಪುರ – ರಮೇಶ್ ಜಿಗಜಿಣಗಿ
ಹಾವೇರಿ – ಶಿವಕುಮಾರ್ ಉದಾಸಿ
ಬಳ್ಳಾರಿ – ದೇವೇಂದ್ರಪ್ಪ
ಧಾರವಾಡ – ಪ್ರಹ್ಲಾದ್ ಜೋಶಿ
ಉತ್ತರ ಕನ್ನಡ – ಅನಂತಕುಮಾರ್ ಹೆಗಡೆ
ದಾವಣಗೆರೆ – ಜಿ.ಎಂ.ಸಿದ್ದೇಶ್ವರ್
ತುಮಕೂರು – ಜಿ.ಎಸ್.ಬಸವರಾಜ್
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಹಾಸನ – ಎ.ಮಂಜು
ದಕ್ಷಿಣ ಕನ್ನಡ – ನಳಿನ್ ಕುಮಾರ್ ಕಟೀಲ್
ಉಡುಪಿ-ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ
ಮೈಸೂರು-ಕೊಡಗು – ಪ್ರತಾಪ್ ಸಿಂಹ
ಬೆಂಗಳೂರು ಉತ್ತರ – ಡಿ.ವಿ.ಸದಾನಂದಗೌಡ
ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್
ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ
ಚಿತ್ರದುರ್ಗ – ಸಿ.ನಾರಾಯಣ ಸ್ವಾಮಿ
ಚಾಮರಾಜನಗರ – ವಿ.ಶ್ರೀನಿವಾಸ್ ಪ್ರಸಾದ್
ಬೆಳಗಾವಿ – ಸುರೇಶ್ ಅಂಗಡಿ
BJP Lok Sabha 1st full list: BJP announces names of 184 candidates