ವಿಶ್ವದಲ್ಲಿ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶ-ಐಎಂಎಫ್

ವಾಷಿಂಗ್ಟನ್, ಮಾ.22- ಭಾರತವು ವಿಶ್ವದಲ್ಲಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಿರುವ ಬೃಹತ್ ಆರ್ಥಿಕತೆಯ ದೇಶ ಎಂದು ಅಂತಾರಾಷ್ಟೀಯ ಹಣಕಾಸು ನಿಧಿ(ಐಎಂಎಫ್) ಬಣ್ಣಿಸಿದೆ.

ಭಾರತವು ಕಳೆದ ಐದು ವರ್ಷಗಳಲ್ಲಿ ಹಲವಾರು ಮಹತ್ವದ ಸುಧಾರಣೆಗಳನ್ನು ಜಾರಿಗೊಳಿಸಿದ್ದು, ಅದು ಮತ್ತಷ್ಟು ಅನುಷ್ಠಾನಗೊಳ್ಳುವ ಅಗತ್ಯವಿದೆ ಎಂದೂ ಐಎಂಎಫ್ ಸಲಹೆ ಮಾಡಿದೆ.

ವಾಷಿಂಗ್ಟನ್‍ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಎಂಫ್ ಸಂಪರ್ಕ ವಿಭಾಗದ ನಿರ್ದೇಶಕ ಗೇರಿ ರೈಸ್, ಕಳೆದ ಐದು ವರ್ಷಗಳಲ್ಲಿ ಭಾರತದ ಸರಾಸರಿ ಆರ್ಥಿಕ ಬೆಳವಣಿಗೆ ಶೇಕಡ ಏಳರಷ್ಟು ತಲುಪಿದೆ ಎಂದು ಹೇಳಿದರು.

ನೋಟು ಅಮಾನ್ಯೀಕರಣ, ಜಿಎಸ್‍ಟಿ ಜಾರಿ ಸೇರಿದಂತೆ ಹಲವಾರು ಪ್ರಮುಖ ಸುಧಾರಣೆಗಳನ್ನು ಭಾರತ ಅನುಷ್ಠಾನಗೊಳಿಸಿದೆ ಈ ಅಧಿಕ ಪ್ರಗತಿಯ ಸುಸ್ಥಿರತೆಯನ್ನು ಕಾಯ್ದುಕೊಳ್ಳಲು ಭಾರತ ಹೊಂದಿರುವ ಭೌಗೋಳಿಕ ಲಾಭ, ಅವಕಾಶ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ತರುವ ಅಗತ್ಯವಿದೆ ಎಂದು ಗೇರಿ ರೈಸ್ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ