ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ವಿನಯ್‍ಕುಲಕರ್ಣಿ ವಿರುದ್ಧ ತೀವ್ರ ಅಸಮಾಧಾನ

ಬೆಂಗಳೂರು, ಮಾ.19-ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ವಿನಯ್‍ಕುಲಕರ್ಣಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಸಮಾಜಕ್ಕೆ ಒಳಿತಾಗುವ ರೀತಿಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜಕ್ಕೆ ಒಳ್ಳೆಯದಾಗುವ ನಿಟ್ಟಿನಲ್ಲಿ ಸ್ವಾಮೀಜಿಗಳು ಹಾಗೂ ಸಮಾಜದ ಮುಖಂಡರೊಡನೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಲಿಂಗಾಯತ ಧರ್ಮದ ಪರ-ವಿರೋಧಿ ವಾದಿಗಳು, ಸ್ವಾಮೀಜಿಗಳು, ಮುಖಂಡರು ಮುಖ್ಯಮಂತ್ರಿಗಳನ್ನು ಭೇಡಿ ಮಾಡಿ ಮನವಿ ಮಾಡಿದ್ದಾರೆ. ಸಂಪುಟ ಸಭೆಯ ತೀರ್ಮಾನ ನೋಡಿ ನಂತರ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ವಿನಯ್‍ಕುಲಕರ್ಣಿ ಅವರು ಡೇರಿ ಹೊಂದಿದ್ದಾರೆ. ಅವರ ಡೈರಿ ಇಲ್ಲದಿದ್ದರೆ ಧಾರವಾಡ ಪೇಡಾ ಬರೋದಿಲ್ಲ ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಖಾರವಾಗಿ ನುಡಿದರು.

ಬೆಂಗಳೂರು, ಮಾ.19-ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ತನ್ವೀರ್‍ಸೇಠ್ ತಿಳಿಸಿದ್ದಾರೆ.

ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಅಜಯ್‍ಸೇಠ್ ಅವರನ್ನು ವರ್ಗಾವಣೆ ಮಾಡಿ ಅಲ್ಲಿನ ಕಾರ್ಯ ಸುಸೂತ್ರವಾಗಿ ನಡೆಯಲು ಅನುಕೂಲ ಕಲ್ಪಿಸಲು ಮನವಿ ಮಾಡಲಾಗಿದೆ ಎಂದರು.

ಪ್ರಸ್ತುತ ಇಲಾಖೆಯ ಪ್ರಧಾನಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನವಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ