ವಿಧಾನಸಭೆ ಚುನಾವಣೆ ದಿನಾಂಕ ಇದೇ 23ರಂದು ಪ್ರಕಟ ಸಾಧ್ಯತೆ

 

ಬೆಂಗಳೂರು,ಮಾ.19- ರಾಷ್ಟ್ರಮಟ್ಟದಲ್ಲಿ ಗಮನಸೆಳೆದು ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಇದೇ 23ರಂದು ಪ್ರಕಟವಾಗುವ ಸಾಧ್ಯತೆಯಿದ್ದು, ದಿನಾಂಕ ಘೋಷಣೆಯಾದ ತಕ್ಷಣದಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ.

ಚುನಾವಣಾ ಆಯೋಗದ ಮೂಲಗಳ ಪ್ರಕಾರ ಇದೇ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ಮೇ 7ರಿಂದ 13ರೊಳಗೆ ಮತದಾನ ನಡೆಯುವ ಸಾಧ್ಯತೆ ಇದೆ. ದಿನಾಂಕ ಘೋಷಣೆಗೂ ಮೊದಲು ಒ.ಪಿ.ರಾವತ್ ರಾಜ್ಯಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ.

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀತಿ ಸಂಹಿತೆ ಜಾರಿಗೂ ಮುನ್ನ ಸಂಬಂಧಪಟ್ಟ ಕೆಲಸಗಳನ್ನು ಮಾಡುತ್ತಿದೆ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಜೊತೆಗೂ ಸಭೆ ನಡೆಸಲಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಮಾ.23ರಂದು ಕೇಂದ್ರ ಚುನಾವಣಾ ಆಯುಕ್ತ ಒ.ಪಿ.ರಾವತ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ. ಮೇ 7ರಿಂದ 13ರೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇದೇ 23ರಂದು ನೀತಿ ಸಂಹಿತೆ ಜಾರಿಗೆ ಬಂದರೆ 45 ದಿನಗಳ ನಂತರ ಮತದಾನ ನಡೆಯಬೇಕಿದೆ. ಮಾರ್ಚ್ ಅಂತ್ಯದೊಳಗೆ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ರಾಜಕೀಯ ಪಕ್ಷಗಳೂ ಸಿದ್ಧತೆ ಆರಂಭಿಸಿವೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಬಾಕಿ ಇರುವ ಕೆಲಸಗಳತ್ತ ಗಮನ ಹರಿಸಿದ್ದಾರೆ.

ಬೇಗ ಕಾಮಗಾರಿ ಮುಗಿಸಲು ಸೂಚನೆ
ಯಾವುದೇ ಸಂದರ್ಭದಲ್ಲೂ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬಹುದಾದ ಹಿನ್ನೆಲೆಯಲ್ಲಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಆದಷ್ಟು ಶೀಘ್ರವಾಗಿ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವಂತೆ ಬಿಜೆಪಿ ತನ್ನ ಶಾಸಕರಿಗೆ ಸೂಚಿಸಿದೆ.

ಈ ತಿಂಗಳ ಕೊನೆಯವಾರ ಇಲ್ಲವೇ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಬಿಜೆಪಿ ನಾ0ುಕರು ಸೂಚಿಸಿದ್ದಾರೆ.

ಕರ್ನಾಟಕದಲ್ಲಿ ಮೇ 13ರೊಳಗೆ ವಿಧಾನಸಭೆ ಚುನಾವಣೆ ಪೂರ್ಣಗೊಂಡು ಹೊಸ ಸರ್ಕಾರ ರಚನೆಯಾಗಬೇಕು. 29ರೊಳಗೆ 15ನೇ ವಿಧಾನಸಭೆ ವಿಸರ್ಜನೆಯಾಗಿ 30ರಂದು 16ನೇ ವಿಧಾನಸಭೆ ಅಸ್ತಿತ್ವಕ್ಕೆ ಬರಲಿದೆ. ಆಯೋಗ ಯಾವುದೇ ಸಂದರ್ಭದಲ್ಲೂ ದಿನಾಂಕವನ್ನು ನಿಗದಿಪಡಿಸಲಿದೆ ಎಂದು ಸೂಚಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಅಂತಿಮಗೊಳಿಸಿದೆ. ಚುನಾವಣೆ ನಡೆಸಲು ಬೇಕಾದ ಸಿಬ್ಬಂದಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ. ಏ.3ರೊಳಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಯುವುದರಿಂದ ಮತ ಕೇಂದ್ರ ಹಾಗೂ ಮತ ಎಣಿಕೆಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಅಷ್ಟರೊಳಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುವಂತೆ ಸಲಹೆ ಮಾಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು , ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ಊಹಾಪೆÇೀಹಗಳಿಗೆ ಕಿವಿಗೊಡದೆ ಕ್ಷೇತ್ರದಲ್ಲೇ ಮತದಾರರ ಜೊತೆ ಇನ್ನು ಹೆಚ್ಚು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸಲಹೆ ಮಾಡಿದ್ದಾರೆ.

ಊಹಾಪೆÇೀಹಗಳು, ವದಂತಿಗಳಿಗೆ ಕಿವಿಗೊಡಬೇಕಾದ ಅಗತ್ಯವಿಲ್ಲ. ನಿಗದಿತ ಸಮಯಕ್ಕೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆ0ುಲಿದೆ. ಚುನಾವಣಾ ಆಯೋಗದ ಯಾವುದೇ ವಿಷಯದಲ್ಲೂ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೆ ಅದನ್ನು ಎದುರಿಸಲು ನೀವು ಸಮರ್ಥರಾಗಬೇಕು. ರಾಜಧಾನಿಯಲ್ಲಿ ಕುಳಿತುಕೊಳ್ಳುವುದು ಇಲ್ಲವೇ ಕ್ಷೇತ್ರ ಬಿಟ್ಟು ಹೊರಹೋಗುವುದು ಸರಿಯಿಲ್ಲ ಎಂದು ಸೂಚಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ಯಾವುದೇ ಕೆಲಸವನ್ನು ಮಾಡಲು ಅವಕಾಶವಿರವುದಿಲ್ಲ. ಇರುವ ಸಮಯದಲ್ಲೇ ಮತದಾರರ ಮನ ಗೆಲ್ಲಲು ಮುಂದಾಗಬೇಕು. ಒಂದೊಂದು ನಿಮಿಷವನ್ನೂ ಸಹ ವ್ಯರ್ಥ ಮಾಡದೆ ಕ್ಷೇತ್ರದಲ್ಲೇ ಇರಬೇಕೆಂದು ಕಟ್ಟುನಿಟ್ಟಿನ ಸೂಚನೆಯನ್ನು ಹೈಕಮಾಂಡ್ ನೀಡಿದೆ ಎಂದು ಮೂಲಗಳು ಖಚಿತಪಡಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ