ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಖಚಿತವಾಗಿದೆ. ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಮೂಲಕ ಇದೇ ಮೊದಲಬಾರಿಗೆ ರಾಹುಲ್ ಗಾಂಧಿ ಎರಡುಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಂತಾಗಿದೆ. ಈ ವಿಷಯವನ್ನು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿವೆ. ರಾಹುಲ್ ಗಾಂಧಿ ಅವರು ಪ್ರಸ್ತುತ ಉತ್ತರ ಪ್ರದೇಶದ ಅಮೇಥಿ ಲೋಕ ಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಈ ಬಾರಿಯೂ ಸಹ ರಾಹುಲ್ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. ಮತ್ತು ದಕ್ಷಿಣ ಭಾರತದ ಕೇರಳ ರಾಜ್ಯದಿಂದಲೂ ಸಹ ರಾಹುಲ್ ತಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.
ಈ ಕುರಿತು ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ, ದಕ್ಷಿಣ ಭಾರತದ ಎಲ್ಲಾ ರಾಜ್ಯಗಳೂ ತಮ್ಮ ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿಕೊಂಡಿದ್ದವು. ಈ ವಿಚಾರವಾಗಿ ಬಹಳಷ್ಟು ಯೋಚಿಸಿ ಚರ್ಚಿಸಿದ ಬಳಿಕ ನಮ್ಮ ಪಕ್ಷದ ಅಧ್ಯಕ್ಷರು ಕೇರಳದ ವಯನಾಡ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ಈ ವಯನಾಡ್ ಕ್ಷೇತ್ರವು ತನ್ನ ಗಡಿಭಾಗವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿದೆ.
ಹಾಗಾಗಿ ಈ ಎರಡು ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಸ್ಪರ್ಧೆ ಬಲತುಂಬಲಿದೆ ಎಂದು ತಿಳಿಸಿದ್ದಾರೆ.
lok sabha election,rahul gandhi,kerala,vayanad