ಬೆಂಗಳೂರು, ಏ.3-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ತಮ್ಮ ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಜನತಾ ರಂಗ ಕರ್ನಾಟಕ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಟಿಪ್ಪು ಸಂಯುಕ್ತ ರಂಗ ಅಧ್ಯಕ್ಷ ಸರ್ದಾರ ಅಹಮದ್ ಖುರೇಷಿ ಮಾತನಾಡಿ, ಮುಂಬರುವ ದಿನಗಳಲ್ಲಿ ದೆಹಲಿಯ ಗದ್ದಿಗೆ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸಬಹುದು ಎಂದು ಕನಿಷ್ಠ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕೆಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಬಿ.ಕೆ.ಹರಿಪ್ರಸಾದ್ ದಕ್ಷಿಣ ಮತ್ತು ಉತ್ತರ ಸೆಂಟ್ರಲ್‍ನಲ್ಲಿ ಮಾತ್ರ ಪಕ್ಷೇತರ ಅಭ್ಯರ್ಥಿ ಪ್ರಕಾಶ್‍ರೈಗೆ ಬೆಂಬಲಿಸಲು ನಿರ್ಧರಿಸಿದ್ದು ಇನ್ನು ಉಳಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ.
ಸ್ವಾಮಿನಾಥನ್ ವರದಿ ಜಾರಿಗೆ ತರಬೇಕು.ಆಹಾರ ಪದಾರ್ಥಗಳ ಮೇಲೆ ಹಾಕಿರುವ ಜಿ.ಎಸ್.ಟಿ ಸಂಪೂರ್ಣ ರದ್ದಾಗಬೇಕು.ತಾಂತ್ರಿಕ ಕೋರ್ಸುಗಳಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿಯಾಗಬೇಕು. ನಗರ ಪ್ರದೇಶಗಳಲ್ಲಿ ಹೆಚ್ಚು ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು.ದೇಶದಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ ಅವರು ಮೈತ್ರಿ ಸರ್ಕಾರವನ್ನು ಬೆಂಬಲಿಸುವಂತೆ ನಾಗರಿಕರಲ್ಲಿ ಮನವಿ ಮಾಡಿದರು.