ಪರಿಶುಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆ ದುರ್ಬಳಕೆ – ಸುಪ್ರೀಂಕೋರ್ಟ್

ನವದೆಹಲಿ, ಮಾ.20-ಪರಿಶುಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯನ್ನು ಸರ್ಕಾರಿ ನೌಕರರ ವಿರುದ್ಧ ವ್ಯಾಪಕ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಸುಪ್ರೀಂಕೋರ್ಟ್ ಇಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕಾನೂನಿನ ಅಡಿ ದಾಖಲಾಗುವ ಯಾವುದೇ ದೂರಿಗೆ ಸಂಬಂಧಿಸಿದಂತೆ ಸರ್ಕಾರಿ ಸೇವಕರನ್ನು ತಕ್ಷಣ ಬಂಧಿಸುವಂತಿಲ್ಲ ಎಂದು ಮಹತ್ವದ ತೀರ್ಪನ್ನೂ ನೀಡಿದೆ.
ಎಸ್‍ಸಿ/ಎಸ್‍ಟಿ ಕಾಯ್ದೆ ಸಂಬಂಧ ಸರ್ಕಾರಿ ಉದ್ಯೋಗಿಗಳನ್ನು ಬಂಧಿಸುವುದಕ್ಕೂ ಮುನ್ನ ಉಪ ಪೆÇಲೀಸ್ ವರಿಷ್ಠಾಧಿಕಾರಿ ಶ್ರೇಣಿಗಿಂತ ಕಡಿಮೆ ಇಲ್ಲದ ಓರ್ವ ಅಧಿಕಾರಿಯಿಂದ ಪ್ರಾಥಮಿಕ ತನಿಖೆ ನಡೆಸುವುದು ಕಡ್ಡಾಯ ಎಂದು ನ್ಯಾಯಮೂರ್ತಿಗಳಾದ ಆದರ್ಶ ಗೋಯೆಲ್ ಮತ್ತು ಉದಯ್ ಯು. ಲಲಿತ್ ಅವರನ್ನು ಒಳಗೊಂಡ ಪೀಠವು ಹೇಳಿದೆ.
ಈ ಕಾಯ್ದೆಯ ಅಡಿ ದೂರು ದಾಖಲಾದ ಸರ್ಕಾರಿ ಉದ್ಯೋಗಿಗಳಿಗೆ ನಿರೀಕ್ಷಣಾ ಜಾಮೀನು ನೀಡಲು ಯಾವುದೇ ನಿರ್ಬಂಧÀವೂ ಇಲ್ಲ ಎಂದು ಪೀಠವು ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ