ಬೀದರ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಈಶ್ವರ ಖಂಡ್ರೆ ಅವರಿಗೆ ಅವರಿಗೆ ಬೆಂಬಲಿಸುವ ಮೂಲಕ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್ ಅವರು ಮತದಾರರಲ್ಲಿ ಮನವಿ ಮಾಡಿದರು.
ಔರಾದ್ ತಾಲೂಕಿನ ಸಂತಪುರ ಗ್ರಾಮದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕಿದೆ ಎಂದರು.
ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ, ಗೊಂದಲ ಇಲ್ಲ. ನಾವೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿ ಗೆ ಗೆಲ್ಲಿಸಬೇಕು ಎಂದರು.
ಮೋದಿ ಅಲೆಯಲ್ಲಿ ಮಾವು ಗೆಲ್ಲುತ್ತೇವೆ ಎನ್ನುವ ಭ್ರಮೆಯಲ್ಲಿ ಬಿಜೆಪಿಯವರು ಇದ್ದಾರೆ. ಆದರೆ ಈ ಬಾರಿ ಮೋದಿ ಅಲೆಯ ಆಟ ನಡೆಯದು. ಸುಳ್ಳಿನ ಭರವಸೆ ನೀಡುವ ಮೋದಿಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ ಸಿಂಧೆ ಮಾತನಾಡಿ, ಈಶ್ವರ ಖಂಡ್ರೆ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು
ಡಾ. ರಾಹುಲ್ ಆನಂದ ಚೌವ್ಹಾಣ್, ರಾಮ್ ನರೋಟೆ, ಸಂತೋಷ ಬಿರಾದಾರ ಸೇರಿದಂತೆ ಹಲವರು ಕಾರ್ಯಕರ್ತರಿದ್ದರು..