ನವದೆಹಲಿ, ಏ.10- ಬಹು ಕೋಟಿ ರೂ.ಗಳ ಮೇವು ಹಗರಣ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ನೇತೃತ್ವದ ಪೀಠವು ಈ ಪ್ರಕರಣಗಳಲ್ಲಿ ಲಾಲು ಅವರಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿತು.
ವಯೋಮಾನ ಮತ್ತು ಅನಾರೋಗ್ಯದ ಕಾರಣ ಲಾಲು ಅವರಿಗೆ ಜಾಮೀನು ಮಂಜೂರು ಮಾಡಬೇಕೆಂದು ಆರ್ಜೆಡಿ ಮುಖ್ಯಸ್ಥರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಾಲ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.ಆದರೆ ಈ ಕೋರಿಕೆಯನ್ನು ತಳ್ಳಿ ಹಾಕಿದೆ.