ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಅಭ್ಯರ್ಥಿಗಳು

ಬೆಂಗಳೂರು, ಏ.17-ನಿನ್ನೆಯವರೆಗೆ ಅಬ್ಬರದ ಪ್ರಚಾರ ನಡೆಸಿದ ಅಭ್ಯರ್ಥಿಗಳು ಇಂದು ಸದ್ದುಗದ್ದಲವಿಲ್ಲದೆ ಮನೆ ಮನೆಗೆ ತೆರಳಿ ಮತ ಪ್ರಚಾರ ಮಾಡಿದರು.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುವ ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ತುಮಕೂರು, ಉಡುಪಿ-ಚಿಕ್ಕಮಗಳೂರು, ಹಾಸನ ಸೇರಿದಂತೆ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮನೆ ಮನೆಗೆ ತೆರಳಿ ಕರಪತ್ರಗಳನ್ನು ನೀಡುವ ಮೂಲಕ ತಮ್ಮ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಇಂದು ಸಂಜೆ 6 ಗಂಟೆಗೆ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸುವ ಕಾರ್ಯಕ್ರಮವೂ ಕೂಡ ಮುಕ್ತಾಯವಾಗಲಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಮುಖಂಡರು, ಬಿಜೆಪಿ ಪಕ್ಷದ ಮುಖಂಡರು ಇಂದು ಬೆಳಗ್ಗೆಯಿಂದಲೇ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿನ ಮನೆ ಮನೆಗೆ ತೆರಳಿ ಕೈಮುಗಿದು ಮತಯಾಚಿಸುತ್ತಿದ್ದುದು ಕಂಡುಬಂತು.

ಅಭ್ಯರ್ಥಿಗಳು ಮುಖಂಡರ ಮನೆಗಳಿಗೆ ಭೇಟಿ ನೀಡಿ ಕೊನೆ ಕ್ಷಣದ ಮಾತುಕತೆ ನಡೆಸುತ್ತಿದ್ದರು. ಪಕ್ಷದ ಪದಾಧಿಕಾರಿಗಳು, ಬೂತ್ ಏಜೆಂಟರ್‍ಗಳನ್ನು ನೇಮಿಸುವಲ್ಲಿ ಬ್ಯುಸಿಯಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ