ಸಾಧ್ವಿ ಪ್ರಗ್ಯ ಠಾಕೂರ್ ಗೆ ಚುನಾವಣಾ ಆಯೋಗದಿಂದ ನೊಟೀಸ್ ಜಾರಿ

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯ ಠಾಕೂರ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿಗೊಳಿಸಿದೆ.

26/11 ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಬಗ್ಗೆ ಸಾಧ್ವಿ ಪ್ರಗ್ಯಾ ಠಾಕೂರ್ ನೀಡಿದ್ದ ಹೇಳಿಕೆ ವಿವಾದ ಉಂಟುಮಾಡಿದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಸಾಧ್ವಿ ಪ್ರಗ್ಯಾ ಠಾಕೂರ್ ಗೆ ನೊಟೀಸ್ ನೀಡಿದೆ.

ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಎ.ಟಿ.ಎಸ್‌. ಮುಖ್ಯಸ್ಥ ಹೇಮಂತ ಕರ್ಕರೆ ಅವರಿಗೆ ನಾನು ಶಾಪ ಹಾಕಿದ್ದೆ. ನನ್ನ ಶಾಪದಿಂದ ಹಾಗೂ ಅವರ ಕರ್ಮದಿಂದ ಮೃತಪಟ್ಟಿದ್ದಾರೆ ಎಂದು ಸಾಧ್ವಿ ಪ್ರಗ್ಯಾ ಠಾಕೂರ್ ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರಗ್ಯಾ ಠಾಕೂರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಅಲ್ಲದೇ ಪ್ರಗ್ಯಾ ಗೆ ಟಿಕೆಟ್ ನೀಡಿದ್ದನ್ನು ವಿಪಕ್ಷಗಳು ತೀವ್ರ ತರಾತೆಗೆ ತೆಗೆದುಕೊಂಡಿದ್ದರು.

EC to issue notice to Sadhvi Pragya on her remarks against Hemant karkare

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ