
ಜೈಸಲ್ಮೇರ್ ,ಮಾ.22- ರಾಜಸ್ಥಾನದ ಜೈಸಲ್ಮೇರ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.
ದೇಶದಲ್ಲಿ ಮಹಾತ್ಮರ ಪ್ರತಿಮೆಗಳನ್ನು ಧ್ವಂಸಗೊಳಿಸುವ ಕೃತ್ಯ ಮುಂದುವರೆದಿದ್ದು, ರಾಷ್ಟ್ರಪಿತ ಗಾಂಧಿ ಅವರ ಪ್ರತಿಮೆಯನ್ನೂ ಧ್ವಂಸಗೊಳಿಸಿದ್ದಾರೆ. ಈ ಸಂಬಂಧ ಪೆÇಲೀಸರು ಒಬ್ಬನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪಶ್ಚಿಮಬಂಗಾಳದಲ್ಲಿ ಕಳೆದ ವಾರವಷ್ಟೇ ನೆಹರೂ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ಬೆನ್ನಲ್ಲೇ ರಾಜಸ್ಥಾನದಲ್ಲಿ ಈ ಪ್ರಕರಣ ನಡೆದಿದೆ.