ಭೋಪಾಲ್ ಲೋಕಸಭಾ ಕ್ಶೇತ್ರದಿಂದ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ನಾಮಪತ್ರ ಸಲ್ಲಿಕೆ

ಭೋಪಾಲ್: ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಪ್ರಗ್ಯಾ ಸಿಂಗ್ ಥಾಕೂರ್ ಅವರು ತಮ್ಮ ಮೂವರು ಬೆಂಬಲಿಗರು ಹಾಗೂ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.

ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ಸೆಪ್ಟೆಂಬರ್ 29, 2008ರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಸ್ಫೋಟ ಪ್ರಕರಣದ ಏಳು ಆರೋಪಿಗಳಲ್ಲಿ ಪ್ರಗ್ಯಾ ಸಿಂಗ್ ಸಹ ಒಬ್ಬರಾಗಿದ್ದು, ಬಾಂಬೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ