ಮತಗಟ್ಟೆ ಆವರಣದಲ್ಲೇ ಮತಯಾಚನೆ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾದರಿ ನೀತಿಸಹಿತೆ ಉಲ್ಲಂಘನೆ ಮಾಡಿದ್ದಾರೆ. ಮತಗಟ್ಟೆಯ ಒಳಗಡೆ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಬೆಳಗಾವಿಯ ಹಿಂಡಲಗಾ 60ರ ಮತಗಟ್ಟೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತನ್ನ ತಾಯಿ, ಪುತ್ರ ಮತ್ತು ಸಹೋದರನ ಜೊತೆಗೆ ಬಂದು ಮತದಾನ ಮಾಡಿದರು. ಈ ವೇಳೆ ಮತಗಟ್ಟೆ ಆವರಣದಲ್ಲಿ ಮತದಾರರಿಗೆ ಕೈಮುಗಿದು ಇದೊಂದು ಬಾರಿ ಮತ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಮತಗಟ್ಟೆಯ ಆವರಣದ ಒಳಗಡೆ ಮತಯಾಚನೆ ಮಾಡುವಂತಿಲ್ಲ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮತಯಾಚನೆ ಮಾಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ