ಕಾಂಗ್ರೇಸ್ ಸೇರ್ಪಡೆಯಾದ ಬಿಜೆಪಿ ಸಂಸದ ಉದೀತ್‍ರಾಜ್

ನವದೆಹಲಿ,ಏ.24- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪುನಃ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಸಂಸದ ಉದೀತ್‍ರಾಜ್ ಇಂದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿರುವ ಅವರು, ರಾಹುಲ್ ಜೊತೆ ಇರುವ ಭಾವಚಿತ್ರವನ್ನು ಟ್ವಿಟರ್‍ನಲ್ಲಿ ಬಹಿರಂಗಪಡಿಸಿದ್ದಾರೆ.

ನಾನು ರಾಷ್ಟ್ರೀಯ ಅಧ್ಯಕ್ಷರ ಜೊತೆ ಇದ್ದೇನೆ. ಅಧಿಕೃತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದೇನೆ. ಯಾವಾಗಲು ಬಿಜೆಪಿಯ ಸಿದ್ದಾಂತಗಳನ್ನು ವಿರೋಧಿಸುತ್ತಿದ್ದೆ ಎಂದು ತಮ್ಮ ಅಧಿಕೃತ ಟ್ವಿಟರ್‍ನಲ್ಲಿ ಹೇಳಿಕೊಂಡಿದ್ದಾರೆ.

ರಾಹುಲ್‍ಗಾಂಧಿ ತಮ್ಮ ಟ್ವಿಟರ್‍ನಲ್ಲಿ ಉದೀತ್‍ರಾಜ್‍ಗೆ ಸುಸ್ವಾಗತ ಕೋರಿದ್ದು, ಕಾಂಗ್ರೆಸ್ ಪಕ್ಷ ನಿಮ್ಮನ್ನು ಆತ್ಮೀಯವಾಗಿ ಸ್ವಾಗತ ಮಾಡುತ್ತದೆ ಎಂದು ಹೇಳಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದ ಉದೀತ್‍ರಾಜ್ ಅವರಿಗೆ ಬಿಜೆಪಿ 2ನೇ ಬಾರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಏಕೆಂದರೆ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‍ಗೆ ಟಿಕೆಟ್ ನೀಡಿದೆ. ಬಿಜೆಪಿ ಯಾವಾಗ ತನಗೆ ಟಿಕೆಟ್ ನೀಡುವುದಿಲ್ಲ ಎಂಬುದು ಖಾತ್ರಿಯಾಯಿತೋ ಆಗ ಉದೀತ್‍ರಾಜ್ ಕಾಂಗ್ರೆಸ್‍ನತ್ತ ಮುಖ ಮಾಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ