ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು 50:50 ರಷ್ಟು ಪಕ್ಕಾ !

ನವದೆಹಲಿಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದು 50-50 ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಕೆಲವು ತಿಂಗಳುಗಳ ಹಿಂದಷ್ಟೇ ರಾಜಕೀಯ ಪ್ರವೇಶಿಸಿದ್ದ ಪ್ರಿಯಾಂಕಾ ಗಾಂಧಿ, ನಂತರ ಅವರಿಗೆ ಪಕ್ಷ ಉತ್ತರ ಪ್ರದೇಶದಲ್ಲಿ ಪೂರ್ವ ಭಾಗದ ಉಸ್ತುವಾರಿಯನ್ನು ವಹಿಸಿತ್ತು. ಈಗ ಪ್ರಿಯಾಂಕಾ ಗಾಂಧಿಯವರ ಮೊದಲ ಚೊಚ್ಚಲ ಚುನಾವಣೆಯಾ ಸ್ಪರ್ಧೆಯ ವಿಚಾರವಾಗಿ ತಾಯಿ ಸೋನಿಯಾ ಗಾಂಧಿ ಒಲವು ತೋರಿಸಿಲ್ಲವೆನ್ನಲಾಗಿದೆ.ಆದರೆ ಮೂಲಗಳು ಹೇಳುವಂತೆ ಪ್ರಿಯಾಂಕಾ ಗಾಂಧಿಯವರು ಚುನಾವಣೆಯಲ್ಲಿ ಗೆಲುವು ಅಥವಾ ಸೋಲಿನ ಫಲಿತಾಂಶದ ಕುರಿತಾಗಿ ಚಿಂತಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹ ಹೆಚ್ಚು ಕೇಳಿ ಬಂದಿತ್ತು. ಕಾಂಗ್ರೆಸ್ ಪಕ್ಷ ನಂತರ ಸೋನಿಯಾ ಗಾಂಧಿಯವರನ್ನು ಮತ್ತೆ ಆ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿತ್ತು.ಈ  ಹಿನ್ನಲೆಯಲ್ಲಿ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಎಲ್ಲ ಊಹಾಪೋಹಗಳಿಗೆ ತೆರೆಬಿದ್ದಿತ್ತು.

ಈಗ ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದೇ ಆದಲ್ಲಿ ಆಗ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಅವರಿಗೆ ಬೆಂಬಲ ನೀಡಲಿವೆ ಎನ್ನುವುದು ಈಗ ಯಕ್ಷ ಪ್ರಶ್ನೆಯಾಗಿದೆ.ಉತ್ತರ ಪ್ರದೇಶದ ಪೂರ್ವ ಭಾಗದ ಉಸ್ತುವಾರಿ ವಹಿಸಿದ ನಂತರ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಿರುವ ಪ್ರಿಯಾಂಕಾ, ಈಗ ಮೋದಿ ವಿರುದ್ಧ ಸ್ಪರ್ಧಿಸಿದ್ದೆ ಆದಲ್ಲಿ ವಾರಣಾಸಿಯಲ್ಲಿ ಚುನಾವಣಾ ರಂಗು ಇನ್ನು ದ್ವಿಗುಣಗೊಳ್ಳಲಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ