ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆದಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಬಿಜ್‌ಬೆಹ್ರಾ ಪ್ರಾಂತ್ಯದ ಬಗೇಂದರ್ ಮೊಹಲ್ಲಾದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೆರೆಗೆ ಪೊಲೀಸರು ಹಾಗೂ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದವು. ಈ ವೇಳೆ ಪರಸ್ಪರ ಗುಂಡಿನ ದಾಳಿ ನಡೆದಿದ್ದು, ಭದ್ರತಾ ಪಡೆಗಳು ಉಗ್ರರನ್ನು ಹೊಡೆದುರುಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದ್ದು, ಇವರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
2 Terrorists Shot Dead In Jammu And Kashmir’s Anantnag