ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿ ಅಪರಾಧಿ: ಸೂರತ್‌ ಕೋರ್ಟ್

ಅಹಮದಾಬಾದ್: ಸ್ವಯಂಘೋಷಿತ ದೇವ ಮಾನವ ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದು, ನಾರಾಯನ ಸಾಯಿ ಅಪರಾಧಿ ಎಂದು ಗುಜರಾತ್‌ ಕೋರ್ಟ್ ಘೋಷಿಸಿದೆ.

ಗುಜರಾತ್‌ನ ಸೂರತ್‌ನ ಸೆಷನ್ಸ್ ನ್ಯಾಯಾಲಯ ನಾರಾಯಣ ಸಾಯಿಯನ್ನು ಅಪರಾಧಿ ಎಂದು ಘೋಷಿಸಿದ್ದು, ಏಪ್ರಿಲ್ 30, 2019ರಂದು ಶಿಕ್ಷೆ ಪ್ರಮಾಣವನ್ನು ಘೋಷಿಸಲಿದೆ.

2013 ರಲ್ಲಿ ಪೊಲೀಸರಿಗೆ ದೂರು ನೀಡಿದ್ದ ಸೂರತ್ ಮೂಲದ ಇಬ್ಬರು ಸಹೋದರಿಯರು ಅಸಾರಾಂ ಬಾಪು ಹಾಗೂ ಅವರ ಪುತ್ರ ನಾರಾಯಣ ಸಾಯಿ ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಈ ಪೈಕಿ ಒಬ್ಬಳು ಯುವತಿ ನಾರಾಯಣ ಸಾಯಿ ತಮ್ಮನ್ನು 2002ರಿಂದ 2005ರ ನಡುವೆ ಹಲವು ಬಾರಿ ಅತ್ಯಾಚಾರವೆಸಗಿದ್ದಾರೆ. ತಾನು ಆಶ್ರಮದಲ್ಲಿದ್ದಾಗ ಅಸಾರಾಂ ಬಾಪು ಪುತ್ರ ಹಲವು ಬಾರಿ ಅತ್ಯಾಚಾರವೆಸಗಿದ್ದರು ಎಂದು ದೂರಿನಲ್ಲಿ ವಿವರಿಸಿದ್ದರು.

ಇನ್ನೊಂದೆಡೆ, ಸ್ವಯಂಘೋಷಿತ ದೇವ ಮಾನವ ಅಸಾರಾಂ ಬಾಪು ಸಹ ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದು, ಜೋಧಪುರದ ಅತ್ಯಾಚಾರ ಕೇಸ್‌ನಲ್ಲಿ ಅಪರಾಧಿಯಾಗಿರುವ ಅವರು ಜೈಲಿನಲ್ಲಿದ್ದಾರೆ.

Narayan Sai, son of Asaram found guilty in a rape case, by Surat Sessions Court

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ