ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ವಿರುದ್ಧ ದೆಹಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಏ.25ರಂದು ದೆಹಲಿಯ ಜಂಗ್ಪುರಾದಲ್ಲಿ ನಡೆಸಿದ ಚುನಾವಣಾ ರ್ಯಾಲಿಗೆ ಗಂಭೀರ್ ಯಾವುದೇ ಅನುಮತಿ ಪಡೆದುಕೊಂಡಿರಲಿಲ್ಲ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಿರುವುದರಿಂದ ಪ್ರಕರಣ ದಾಖಲಿಸುವಂತೆ ಚುನಾವಣಾ ಆಯೋಗ ಪೊಲೀಸರಿಗೆ ಸೂಚಿಸಿತ್ತು.
ಈಗಾಗಲೇ ಆಪ್ ಗೌತಮ್ ಗಂಭೀರ್ ವಿರುದ್ಧ ದೂರು ದಾಖಲಿಸಿದೆ. ಗೌಂಭೀರ್ ಎರಡು ಸ್ಥಳಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಆಪ್ ಅಭ್ಯರ್ಥಿ ಅತಿಶಿ ಹಜಾರಿ ಕೋರ್ಟ್ನಲ್ಲಿ ದೂರು ದಾಖಲಿಸಿದ್ದಾರೆ.
ಈಗ ದೆಹಲಿಯ ಪೊಲೀಸರು ಎಫ್ಐಆರ್ ದಾಖಲಿಸಿದ ಬಳಿಕ ಅತಿಶಿ ಟ್ವೀಟ್ ಮಾಡಿದ್ದು, ಮೊದಲು ನಾಮಪತ್ರ ಸಲ್ಲಿಸುವುದರಲ್ಲಿ ಎಡವಿದಿರಿ, ನಂತರ ಎರಡು ಮತದಾನ ಗುರುತು ಪತ್ರ ಹೊಂದುವ ಮೂಲಕ ಕ್ರಿಮಿನಲ್ ಅಪರಾಧ ಮಾಡಿದ್ದೀರಿ, ಈಗ ರ್ಯಾಲಿ ನಡೆಸಲು ಅನುಮತಿ ಪಡೆಯದೆ ಎಫ್ಐಆರ್ ದಾಖಲಾಗಿದೆ. ನಿಮಗೆ ನಿಯಮಗಳೇ ಗೊತ್ತಿಲ್ಲವೆಂದಮೇಲೆ ಆಟಕ್ಕೆ ಯಾಕೆ ಇಳಿಯುತ್ತೀರಿ ಎಂದು ಪ್ರಶ್ನಿಸಿದ್ದಾರೆ.