ಲಂಕಾ ಬಾಂಬ್ ಸ್ಪೋಟ ಹಿನ್ನಲೆ-ಪ್ರಮುಖ ಸ್ಥಳಗಳಿಗೆ ಭದ್ರತೆ ನೀಡುವಂತೆ ಆಗ್ರಹ

ಬೆಂಗಳೂರು, ಏ.27- ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿ ಯಾವುದೇ ವಿಧ್ವಂಸಕ ಕೃತ್ಯಗಳಿಗೆ ಅವಕಾಶವಾಗದಂತೆ ಧಾರ್ಮಿಕ ಕ್ಷೇತ್ರಗಳಿಗೆ ಭದ್ರತಾ ನೀಡುವಂತೆ ಭಾರತ ಜನ ಜಾಗೃತಿ ಸೇನೆ ರಾಜ್ಯಾಧ್ಯಕ್ಷ ಸಿ.ಮುನಿಯಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಲಾಶಯಗಳು, ಪ್ರಮುಖ ಪ್ರವಾಸಿ ತಾಣಗಳು, ದೇವಾಲಯಗಳು, ಧಾರ್ಮಿಕ ಕೇಂದ್ರಗಳು, ಬಸ್, ರೈಲು, ವಿಮಾನ ನಿಲ್ದಾಣಗಳು, ಸೇನೆಯ ವಿವಿಧ ರಕ್ಷಣಾ ಹಾಗೂ ತರಬೇತಿ ಕೇಂದ್ರಗಳು, ದೊಡ್ಡ ದೊಡ್ಡ ಕೈಗಾರಿಕೆಗಳು.

ನ್ಯೂಕ್ಲಿಯರ್ ಮತ್ತು ಥರ್ಮಲ್ ಘಟಕಗಳು, ಪ್ರಮುಖ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಕಚೇರಿಗಳು, ವಿದ್ಯುತ್ ಉತ್ಪಾದನಾ ಕೇಂದ್ರಗಳು, ಪಟ್ರೊಲಿಯಂ ಉತ್ಪನ್ನಗಳ ಸಂಸ್ಕರಣಾ ಘಟಕಗಳು ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳು, ಜನನಿಬಿಡ ಪ್ರದೇಶಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ಅವರು ಒತ್ತಾಯಿಸಿದರು.

ಇತ್ತೀಚೆಗೆ ಶ್ರೀಲಂಕಾದಲ್ಲಿ ಸರಣಿ ಬಾಂಬï ಸ್ಫೋಟದಿಂದಾಗಿ, 12 ಜನ ಭಾರತೀಯರು ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇಂತಹ ದುರ್ಘಟನೆ ಮುಂದುವರೆಯಬಾರದು.ಹೀಗಾಗಿ, ರಾಜ್ಯದಲ್ಲಿ ಕಟ್ಟೆಚ್ಚರವಹಿಸಬೇಕು ಎಂದು ಅವರು ಇದೇ ವೇಳೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ