ಮಂಡ್ಯ, ಏ.30- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.
ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ಕಾರು ಇದೇ ರಸ್ತೆಯಲ್ಲಿ ಬರುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದು , ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು , ಸ್ಥಳೀಯರು ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತಪಟ್ಟ ವ್ಯಕ್ತಿಯ ಹೆಸರು ಹಾಗೂ ವಿಳಾಸ ಪತ್ತೆಯಾಗಿಲ್ಲ. ಬೆಳ್ಳೂರು ಠಾಣೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.