ತಿ.ನರಸೀಪುರ, ಏ.30- ಹೃದಯಾಘಾತದಿಂದ ಪಟ್ಟಣದ ಕಾಂಗ್ರೆಸ್ ಮುಖಂಡ ಸಿ.ಶಿವಸ್ವಾಮಿ(48) ಅವರು ನಿನ್ನೆ ಮೃತಪಟ್ಟಿದ್ದಾರೆ.
ಪಟ್ಟಣದ ಹಳೇ ಕುರುಬಗೇರಿ ನಿವಾಸದಲ್ಲಿ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು.
ಪತ್ನಿ ಸೇರಿದಂತೆ ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪಟ್ಟಣದ ಕುರುಬ ಸಮುದಾಯ ರುದ್ರಭೂಮಿಯಲ್ಲಿ ಮಧ್ಯಾಹ್ನ ದಿವಂಗತ ಅಂತ್ಯಕ್ರಿಯೆ ನಡೆಯಿತು.