ಬಳ್ಳಾರಿ,ಮೇ 5- ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಧಾರುಣವಾಗಿ ಮೃತಪಟ್ಟಿರುವ ಘಟನೆಯ ಇಂದು ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ನಡೆದಿದೆ.
ಕೂಡ್ಲಿಗಿ ತಾಲೂಕಿನ ಮಾಡ್ಲಕನಹಳ್ಳಿ ಗ್ರಾಮದ ನಿವಾಸಿ ಹನುಮಕ್ಕ (49) ಹಾಗೂ ಮಂಜುನಾಥ್ (28) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಮಂಜುನಾಥ್ ಅವರ ಪುತ್ರ ಹರೀಶ್ (5) ಎಂಬುವವನಿಗೆ ಗಾಯಗಳಾಗಿದೆ.
ಆಂಧ್ರ ಪ್ರದೇಶದ ರಾಯದುರ್ಗದ ಆಸ್ಪತ್ರೆಯೊಂದರಲ್ಲಿ ಕಳೆದ ಶುಕ್ರವಾರ ಮಂಜುನಾಥ್ ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ಮಗು-ತಾಯಿಯ ಆರೋಗ್ಯ ವಿಚಾರಿಸಿಕೊಂಡು ಬರಲು ಇಂದು ಮಂಜುನಾಥ್ ತನ್ನ ತಾಯಿ ಹಾಗೂ ಹಿರಿಯ ಮಗನೊಂದಿಗೆ ಮಾಡ್ಲಕನಹಳ್ಳಿ ಗ್ರಾಮದಿಂದ ಬೈಕ್ನಲ್ಲಿ ತೆರಳುತ್ತಿದ್ದಾಗ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ಹಿಂಬದಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹನುಮಕ್ಕ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಆಸ್ಪತ್ರೆಗೆ ಹೋಗುತ್ತಿದ್ದರು.ಮಂಜುನಾಥ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹರೀಶಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ನಲ್ಲಿದ್ದ ಮಂಜುನಾಥ್ ಅವರ ತಂಗಿಯ ಮಗ ಅಜ್ಜಯ್ಯನಿಗೆ ಯಾವುದೇ ಗಾಯಗಳಾಗಿಲ್ಲ. ಈ ಕುರಿತು ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.