ತಮ್ಲುಕ್: ಫೋನಿ ಚಂಡಮಾರುತದ ವಿಚಾರದಲ್ಲೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದ ಜನರ ಕ್ಷೇಮ ಸಮಾಚಾರ ವಿಚಾರಿಸಲು ನಾನು ಕರೆ ಮಾಡಿದ್ದೆ. ಆದರೆ ನನ್ನ ಕರೆಯನ್ನು ಸ್ವೀಕರಿಸದ ದೀದಿಯದು ದುರಹಂಕಾರದ ಪ್ರವೃತ್ತಿ ಎಂದು ಟೀಕಿಸಿದ್ದಾರೆ.
ನಾನು ಒಡಿಶಾದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪಶ್ಚಿಮ ಬಂಗಾಳದಲ್ಲಿ ಸೈಕ್ಲೋನ್ ನಿಂದ ಉಂಟಾದ ಹಾನಿಯ ಬಗ್ಗೆ ಮಾತನಾಡಲು ಮಮತಾ ಬ್ಯಾನರ್ಜಿ ಅವರಿಗೆ ಫೋನ್ ಮಾಡಿದ್ದೆ. ಆದರೆ ಸೈಕ್ಲೋನ್ ನಿಂದಾಗಿ ಇಡೀ ರಾಜ್ಯ ತತ್ತರಿಸಿರುವಾಗ ಅವರು ರಾಜಕೀಯ ಲೆಕ್ಕಾಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸ್ಪೀಡ್ ಬ್ರೇಕರ್ ದೀದಿ ಅವರು ಚಂಡಮಾರುತದ ವಿಚಾರದಲ್ಲೂ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ. ಉಗ್ರ ಮಸೂದೆ ಅಜರ್ ನನ್ನು ವಿಶ್ವಸಂಸ್ಥೆ ಜಾಗತಿಕ ಉಗ್ರ ಎಂದು ಘೋಷಿಸಿದ ಕ್ರಮದ ಬಗ್ಗೆಯೂ ದೀದಿ ಮೆಚ್ಚುಗೆ ವ್ಯಕ್ತಪಡಿಸಿಲ್ಲ ಎಂದಿದ್ದಾರೆ.