ಮೈಸೂರು, ಮಾ.23-ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರು ನಾಳೆ ಬೆಳಗ್ಗೆ ನಗರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 9.30ಕ್ಕೆ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ ಎಂದು ಹೇಳಿದರು.
ನಂತರ 10 ಗಂಟೆಗೆ ಮಹಾರಾಣಿ ವಿಜ್ಞಾನ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಿದ್ದು, ತದನಂತರ ಚಾಮರಾಜನಗರಕ್ಕೆ ತೆರಳುವರು.
ಮಾ.25ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸಂಜೆ 4 ಗಂಟೆಗೆ ಮೈಸೂರಿಗೆ ಆಗಮಿಸಿ ಅರಮನೆ ಸಮೀಪವಿರುವ ಬಸವೇಶ್ವರ ವೃತ್ತದಿಂದ ಸಮಾವೇಶ ನಡೆಯುವ ಮಹಾರಾಜ ಕಾಲೇಜು ಮೈದಾನಕ್ಕೆ ತೆರಳಲಿದ್ದಾರೆ ಎಂದರು.
ಸಮಾವೇಶಕ್ಕೆ ಮೈಸೂರು, ಕೊಡಗು, ಮಂಡ್ಯದಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಮಲ್ಲಿಕಾರ್ಜುನಖರ್ಗೆ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.