ವಿವಿ ಪ್ಯಾಟ್​ ಸಂಖ್ಯೆ ಶೇ.50ರಷ್ಟು ಹೆಚ್ಚಿಸಲು ವಿರೋಧ ಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪ್ರತಿ ವಿಧಾನಸಭಾ ವಲಯದಲ್ಲಿ ಇವಿಎಂಗಳಿಗೆ ವಿವಿ ಪ್ಯಾಟ್​ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವಂತೆ 21 ವಿರೋಧ ಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

ಮಂಗಳವಾರ ಬೆಳಗ್ಗೆ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ವಿಚಾರಣೆ ಮುಗಿಸಿ, ನಾವು ಈ ಹಿಂದೆ ನೀಡಿರುವ ತೀರ್ಪನ್ನು ಬದಲಿಸಲು ಸಾಧ್ಯವಿಲ್ಲ, ಎಂದು ಹೇಳುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಏಪ್ರಿಲ್​ 8ರಂದು ಸುಪ್ರೀಂಕೋರ್ಟ್​, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಐದು ವಿಧಾನಸಭಾ ವಲಯದಲ್ಲಿ ಕನಿಷ್ಠ ಐದು ಕಡೆ ಇವಿಎಂಗಳೊಂದಿಗೆ ವಿವಿ ಪ್ಯಾಟ್​ಗಳನ್ನು ತಾಳೆ ಮಾಡುವ ವ್ಯವಸ್ಥೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ