ಬೆಂಗಳೂರು:ಮಾ-23: ಕರ್ನಾಟಕ ಸೇರಿ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರು ವಿಜಯ ಸಾಧಿಸಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಬಿ.ಎಂ. ಫಾರೂಕ್ ಅವರು ಸೋಲು ಅನುಭವಿಸಿದ್ದಾರೆ.
ಕರ್ನಾಟಕದ ನಾಲ್ಕು ಸ್ಥಾನಗಳಿಗೆ 5 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ವಿಧಾನಸೌಧದಲ್ಲಿ ನಡೆದ ಮತ ಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 197 ಮತಗಳಲ್ಲಿ ಕಾಂಗ್ರೆಸ್ನ ಜಿ.ಸಿ. ಚಂದ್ರಶೇಖರ್-46, ಡಾ. ಎಲ್.ಹನುಮತಯ್ಯ-44 ಮತ್ತು ನಾಸೀರ್ ಹುಸೇನ್-42 ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್-50 ಮತ್ತು ಜೆಡಿಎಸ್ನ ಫಾರೂಕ್- 2 ಮತಗಳನ್ನು ಪಡೆದಿದ್ದಾರೆ.
ತೆಲಂಗಾಣದಲ್ಲಿ ಟಿಆರ್ ಎಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಲ್ಕು ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಜಾರ್ಖಂಡ್, ಛತ್ತೀಸ್ ಘಡ ಮತ್ತು ತೆಲಂಗಾಣ ಸೇರಿ ಒಟ್ಟು6 ರಾಜ್ಯಗಳ 26 ಸ್ಥಾನಗಳಿಗೆ ಇಂದು ಚುನಾವಣೆ ನಡೆದಿತ್ತು.
Rajya Sabha elections,Congress,wins,three seats