ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯ ಬರ್ಬರ ಕೊಲೆ

ಚೆನ್ನೈ, ಮೇ 15- ಬಾಲ್ಯ ವಿವಾಹವೊಂದನ್ನು ತಡೆದಿದ್ದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಕುಟುಂಬ ಸದಸ್ಯರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ. ಈ ಕೃತ್ಯದಲ್ಲಿ ಹತ್ಯೆಗೀಡಾಗಿದ ವ್ಯಕ್ತಿಯ ಪತ್ನಿಗೂ ಗಂಭೀರ ಗಾಯಗಳಾಗಿವೆ.

ಹತ್ಯೆಯಾದ ವ್ಯಕ್ತಿ ಅಯನಾವರಂ ನಿವಾಸಿ, 48 ವರ್ಷದ ಜೆಬಸೀಲನ್, ಬಾಲ್ಯ ವಿವಾಹ ತಡೆದದ್ದಕ್ಕೆ ಪ್ರತೀಕಾರವಾಗಿ ಕೊಲೆ ಮಾಡಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜೆಬಸೀಲನ್ ಕಳೆದ ವಾರ ತಮ್ಮ ಪ್ರದೇಶದ ಅಯನಾವರಂನಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದಿದ್ದರು. ಶಸ್ತ್ರ ಸಜ್ಜಿತ ವ್ಯಕ್ತಿಗಳ ಗುಂಪು ಕೊಲೆ ಮಾಡಿದ್ದು, ದುಷ್ಕರ್ಮಿಗಳ ದಾಳಿ ತಡೆಯಲು ಯತ್ನಿಸಿದ ಆತನ ಪತ್ನಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಟೋ ಚಾಲಕರಾಗಿದ್ದ ಜೆಬಸೀಲನ್ ಅವರು ಮಗಳ ಮದುವೆ ಆರತಕ್ಷತೆಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕವಾಗಿಯೇ ಈ ದಾಳಿ ನಡೆದಿದ್ದು, ಆತನ ಸಂಬಂಧಿಗಳು ಅಸಹಾಯಕರಾಗಿ ನೋಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಏಪ್ರಿಲ್ 17ರಂದು 16 ವರ್ಷದ ಬಾಲಕಿಗೆ ಮದುವೆ ಮಾಡುತ್ತಿರುವ ವಿಚಾರ ತಿಳಿದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಪೊಲೀಸರೊಂದಿಗೆ ತಾನೂ ಆಗಮಿಸಿ ಬಾಲ್ಯ ವಿವಾಹವನ್ನು ತಡೆದಿದ್ದರು. ಎರಡು ದಿನಗಳ ಹಿಂದಷ್ಟೇ ಜೆಬಸೀಲನ್ ಅವರ ಪುತ್ರಿ ಮದುವೆ ತಿರುಪತಿಯಲ್ಲಿ ನಡೆದಿತ್ತು. ಮಗಳ ಆರತಕ್ಷತೆಯ ದಿನ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ