ಬೆಂಗಳೂರು: ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕುಮಾರಿ ಶೋಭಾ ಕರಂದ್ಲಾಜೆ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು ಎಂದಬುದು ನೆನಪಿರಲಿ ಎಂದು ತಿಳಿಸಿದ್ದಾರೆ.
Bengaluru,Siddaramaiah, Shobha Karandlaje