ಗೋಡ್ಸೆ ಕುರಿತ ವಿವಾದಾತ್ಮಕ ಟ್ವೀಟ್: ಕ್ಷಮೆಯಾಚಿಸಿದ ಸಂಸದ ನಳೀನ್ ಕುಮಾರ್

ಬೆಂಗಳೂರು: ಗೋಡ್ಸೆ ಕುರಿತು ಟ್ವೀಟ್​ ಮಾಡಿದ್ದ ದಕ್ಷಿಣ ಕನ್ನಡದ ಸಂಸದ ನಳಿನ್​ ಕುಮಾರ್​ ಕಟೀಲ್, ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ​ ಕ್ಷಮೆ ಕೇಳಿದ್ದಾರೆ.

ನಳಿನ್​ ಕುಮಾರ್​ ಕಟೀಲ್​ ಅವರು ಗೋಡ್ಸೆ ಕುರಿತು ಬೆಳಿಗ್ಗೆ ಟ್ವೀಟ್​ ಮಾಡಿದ ಬೆನ್ನಲ್ಲೇ ತೀವ್ರವಿರೋಧ ಹಾಗೂ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಟ್ವೀಟ್​ ಅನ್ನು ಡಿಲೀಟ್​ ಮಾಡಿದ್ದು, ‘ನನ್ನ ಕೊನೆಯ ಎರಡು ಟ್ವೀಟ್​ಗಳಿಗೆ ಟೀಕೆ ವ್ಯಕ್ತವಾಗಿದ್ದನ್ನು ಗಮನಿಸಿದ್ದೇನೆ. ಯಾರಿಗಾದರೂ ಅದರಿಂದ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನೋವಾಗಿದೆಯೆಂದು ತಿಳಿದ ತಕ್ಷಣ ಟ್ವೀಟ್ ಹಿಂಪಡೆದಿದ್ದೇನೆ. ಚರ್ಚೆ ಇಲ್ಲಿಗೆ ಮುಗಿಸೋಣ’ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವ ಅನಂತ್​ ಕುಮಾರ್​ ಹೆಗಡೆ ಅವರ ಟ್ವಿಟರ್​ ಖಾತೆಯಲ್ಲೂ ಗೋಡ್ಸೆ ಕುರಿತು ವಿವಾದಾತ್ಮಕ ಟ್ವೀಟ್​ ಪ್ರಕಟವಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅನಂತ್​ ಕುಮಾರ್​, ನನ್ನ ಟ್ವಿಟರ್​ ಖಾತೆ ಹ್ಯಾಕ್​ ಆಗಿತ್ತು. ಗೋಡ್ಸೆ ಕುರಿತು ಟ್ವೀಟ್​ ಆಗಿರುವುದು ತಿಳಿದ ತಕ್ಷಣ ಅದನ್ನು ಡಿಲೀಟ್​ ಮಾಡಿದ್ದೇನೆ. ಈ ಟ್ವೀಟ್​ ಕುರಿತು ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಗಾಂಧೀಜಿ ಹತ್ಯೆಯನ್ನು ನಾನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ದೇಶಕ್ಕೆ ಗಾಂಧೀಜಿ ನೀಡಿದ ಕೊಡುಗೆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

ಈ ನಡುವೆ ರಾಜೀವ್​ ಗಾಂಧಿ ದೇಶದ ಐಕ್ಯತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಅಂತಹವರನ್ನು ಕೊಂದ ಗೋಡ್ಸೆಯನ್ನು ಬಿಜಪಿಯವರು ದೇವರಂತೆ ಪೂಜೆ ಮಾಡುತ್ತಿರುವುದು, ಹಾಗೂ ನಳಿನ್​ ಕುಮಾರ್​ ಕಟೀಲ್ ಅವರಂತಹ ವಿಚಾರಧಾರೆ ಹೆಚ್ಚುತ್ತಿರುವುದು ಖಂಡನೀಯಎಂದು ಕಾರ್ಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಿಡಿಕಾರಿದ್ದಾರೆ.

MP Nalin kumar kateel apology for his tweet

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ