ಇಂಧೋರ್ ನಲ್ಲಿ ಬಿಜೆಪಿ ನಾಯಕನ ಬರ್ಬರ ಹತ್ಯೆ

ಇಂಧೋರ್: ಬಿಜೆಪಿ ನಾಯಕ ನೇಮಿಚಂದ್ ತನ್ವಾರ್‍ನನ್ನು ಕಾಂಗ್ರೆಸ್ ನಾಯಕ ಅರುಣ್ ಶರ್ಮಾ ಆತನ ಮನೆಯ ಹೊರಗಡೆಯೇ ಪಿಸ್ತೂಲ್ ನಿಂದ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ.

ರಾಜಕೀಯ ದ್ವೇಷದಿಂದಲೇ ಬಿಜೆಪಿ ನಾಯಕನನ್ನು ಕೊಲೆ ಮಾಡಲಾಗಿದೆ. ತನ್ವರ್ ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದನು ಎಂದು ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ರಾಕೇಶ್ ಸಿಂಗ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪರ ಕೆಲಸ ಮಾಡಿದ್ದಕ್ಕೆ ಭಾನುವಾರ ಮಧ್ಯಾಹ್ನದ ಬಳಿಕ ತನ್ವರ್ ಹಾಗೂ ಆತನ ಮಕ್ಕಳಿಗೆ ಬೆದರಿಕೆ ಹಾಕಲಾಗಿತ್ತು. ಇದರಿಂದ ತಾವು ಮುಂದೆ ಕೆಟ್ಟ ಪರಿಣಾಮ ಎದರಿಸಬೇಕಾಗುತ್ತದೆ ಎಂದು ತನ್ವರ್ ತಿಳಿಸಿದ್ದರು ಎಂದು ಸಿಂಗ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ಕಾಂಗ್ರೆಸ್ ನಾಯಕನನ್ನು ಕೂಡಲೇ ಬಂಧಿಸಲಾಗುವುದು ಅಲ್ಲದೆ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಗ್ ಭರವಸೆ ನೀಡಿದ್ದಾರೆ.

60-yr-old BJP worker shot dead by Cong leader in MP, party says ‘political rivalry’

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ