ನವದೆಹಲಿ: ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ರಾಜ್ ಬಬ್ಬರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶದಲ್ಲಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ರಾಯ್ಬರೇಲಿ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಮೇಠಿಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲನುಭವಿಸಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ ಬಬ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ ಬಬ್ಬರ್ ‘ಜನರ ವಿಶ್ವಾಸ ಗಳಿಸಲು ಸಫಲರಾದ ವಿಜೇತರಿಗೆ ನನ್ನ ಅಭಿನಂದನೆಗಳು. ಉತ್ತರ ಪ್ರದೇಶ ಕಾಂಗ್ರೆಸ್ಗೆ ಫಲಿತಾಂಶ ನಿರಾಶಾದಾಯಕವಾಗಿದೆ. ನನ್ನ ಜವಾಬ್ದಾರಿಯನ್ನು ನಿಭಾಯಿಸಲು ನಾನು ವಿಫಲನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
UP Congress chief Raj Babbar sends resignation to Rahul Gandhi