ಬೆಂಗಳೂರು, ಮೇ 28- ಬೆಂಗಳೂರು ಜಲಮಂಡಲಿಯ ಸಕಾನಿಅ (ವಾಯವ್ಯ-3) ಉಪವಿಭಾಗದಲ್ಲಿ ನಾಳೆ ಬೆಳಗ್ಗೆ 9.30ರಿಂದ 11 ಗಂಟೆಯವರೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ಅನ್ನು ನಡೆಸಲಾಗುತ್ತದೆ.
ಸಕಾನಿಅ (ವಾಯುವ್ಯ-3) ಉಪವಿಭಾಗದ ವ್ಯಾಪ್ತಿಗೆ ಬರುವ ಹೆಗ್ಗನಹಳ್ಳಿ, ಪೀಣ್ಯ ದಾಸರಹಳ್ಳಿ, ಪೀಣ್ಯ, ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು ನಂ.6, 100 ಅಡಿ ರಸ್ತೆ, ಟಿ.ವಿ.ಎಸ್. ಕ್ರಾಸ್, ಪೀಣ್ಯ 1ನೇ ಹಂತ ಇಲ್ಲಿ ನಡೆಸಲಿದ್ದು ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ವಾಯುವ್ಯ-2): 23311337. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಾಯುವ್ಯ-3) ಉಪವಿಭಾಗ: 28372030.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ:22238888, ಸಹಾಯವಾಣಿ 1916 ಹಾಗೂ ವಾಟ್ಸ್ಆಪ್ ಸಂಖ್ಯೆ: 8762228888 ಗೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯ ಬಳಸಿಕೊಳ್ಳ ಬಹುದಾಗಿದೆ.