ಬೆಂಗಳೂರು: ಮೈತ್ರಿ ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ದೋಸ್ತಿ ನಾಯಕರು ಅದಕ್ಕಾಗಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ.
ಇದೇ ವಿಚಾರವಾಗಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದು, ಇಂದು ಮತ್ತೆ ಕುಮಾರ ಕೃಪಾ ಗೆಸ್ಟ್ ಹೌಸ್ ನಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ, ಗೃಹ ಸಚಿವ ಎಂಬಿ ಪಾಟೀಲ್ ಭಾಗಿಯಾಗಿದ್ದಾರೆ.
ಅತೃಪ್ತರಿಗೆ ಸಚಿವ ಸ್ಥಾನ ನೀಡಿ, ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳು ಪ್ರಯತ್ನ ನಡೆಸುತ್ತಿದ್ದು, ನಿನ್ನೆ ರಾತ್ರಿ ಸಭೆ ನಡೆಸಿದ್ದರು. ಅದರ ಬೆನ್ನೆಲ್ಲೆ ಇದೀಗ ಇಂದು ಕೂಡ ಸಭೆ ನಡೆಸುತ್ತಿದ್ದಾರೆ.